ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೇಣುಕಾಸ್ವಾಮಿ ಕೊಲೆ ಕೇಸ್​: ದರ್ಶನ್​ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ

05:43 PM Jun 12, 2024 IST | Bcsuddi
Advertisement

ಚಿತ್ರದುರ್ಗ:ನಟ ದರ್ಶನ ಹಾಗೂ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿಈಗಾಗಲೇ ದರ್ಶನ್‌ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ತನಿಖೆ ಕೂಡ ಚುರುಕುಗೊಂಡಿದೆ. ದರ್ಶನ್‌ ಹಾಗೂ ಗ್ಯಾಂಗ್​ನಿಂದ ನಡೆದ ರೇಣುಕಾಸ್ವಾಮಿ ಹತ್ಯೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ.

ಚಿತ್ರದುರ್ಗದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಾಲಯದಿಂದ ಡಿಸಿ ಕಚೇರಿವರೆಗೂ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಮೌನ ಪ್ರತಿಭಟನೆ ಮಾಡಲಾಗಿದೆ. ಹಲವು ಸಂಘಟನೆಯ ಮುಖಂಡರು ಮತ್ತು ಸ್ಥಳಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

 

Advertisement
Next Article