ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರೇಣುಕಾ ಸ್ವಾಮಿ ಹತ್ಯೆ ಕೇಸ್ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶಿಸಲ್ಲ'- ಜಿ. ಪರಮೇಶ್ವರ್

01:15 PM Jun 12, 2024 IST | Bcsuddi
Advertisement

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶಿಸಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಕಾನೂನಿನ ಪ್ರಕಾರ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

Advertisement

ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 13 ಮಂದಿ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನುನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ತಿಳಿಸಿದರು.

ದರ್ಶನ್ ಗೆಳತಿ ಬಗ್ಗೆ ರೇಣುಕಾ ಸ್ವಾಮಿ ಪೋಸ್ಟ್ ಮಾಡಿದ್ದ ಎಂಬ ಆರೋಪವಿದೆ. ಹಾಗೆ ಮಾಡಿದ್ದರೆ ಆ ಬಗ್ಗೆ ದೂರು ನೀಡಬಹುದಿತ್ತು. ದೂರು ನೀಡಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರು. ರೇಣುಕಾಸ್ವಾಮಿಯನ್ನು ಕರೆತಂದು ಕೊಲೆ ಮಾಡಿದ ಬಗ್ಗೆ ಆರೋಪ ಇದೆ. ಹೀಗಾಗಿ ಪೊಲೀಸರು ತನಿಖೆ ಮಾಡ್ತಿದ್ದಾರೆ. ಇನ್ನು ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ. ಸದ್ಯ ಪೊಲೀಸರು ಪ್ರಕರಣದ ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಅವರ ತನಿಖಾ ವರದಿ ಕೈಸೇರಿದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

 

Advertisement
Next Article