ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರಿಗೆ ಮುಖ್ಯ ಮಾಹಿತಿ: ನಿಮ್ಮ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ.?

08:16 AM Sep 07, 2024 IST | BC Suddi
Advertisement

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.

Advertisement

ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್‍ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ

ಆರ್‍ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಉದಾಸೀನ ಮಾಡಿದರೆ ಮುಂದಿನ ದಿನಗಳಲ್ಲಿ ಅಂತಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಕ್ಕೆ ತೊಂದರೆ ಉಂಟಾಗಲಿದೆ. ಆರ್‍ಟಿಸಿ ಗೆ ಆಧಾರ್ ಜೋಡಣೆ ಮಾಡುವುದರಿಂದ ಜಮೀನಿನ ದಾಖಲೆ ಮತ್ತಷ್ಟು ಸುರಕ್ಷಿತವಾಗಿರುತ್ತದೆ. ಭೂ ದಾಖಲೆ ಪಡೆಯುವುದು ಸುಲಭ. ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳವಾಗುತ್ತದೆ. ಖಾತಾ ವಿವಾದವನ್ನು ತಪ್ಪಿಸಲು ಅನುಕೂಲ, ಸಾಲ ಪ್ರಕ್ತಿಯೆ ಸುಲಭ ಹಾಗೂ ಜಮೀನು ಮಾರಾಟ ಸಮಯದಲ್ಲಿ ಹೆಚ್ಚಿನ ಪಾರದರ್ಶಕತೆ ಇರುತ್ತದೆ ಆದ್ದರಿಂದ ತಮ್ಮ ಆರ್‍ಟಿಸಿ ಗೆ ಆಧಾರ್ ಜೋಡಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಪಹಣಿಗೆ ಆಧಾರ ಜೋಡಣೆ ಮಾಡುವದರಿಂದ ಯಾರದೋ ಜಮೀನು ಇನ್ಯಾರೋ ಮಾರಾಟ ಮಾಡುವ ವಂಚನೆ ತಪ್ಪಿಸಲು ಸಹಕಾರಿಯಾಗಿದ್ದು, ರೈತರು ಬೇಗನೆ ತಮ್ಮ ಜಮೀನು ಪಹಣಿಗೆ ಆಧಾರ ಜೋಡಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Tags :
ರೈತರಿಗೆ ಮುಖ್ಯ ಮಾಹಿತಿ: ನಿಮ್ಮ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ.?
Advertisement
Next Article