ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರು ಇದೇ 6ರಂದು ದೆಹಲಿಯಲ್ಲಿ ಪ್ರತಿಭಟನೆ.! 10 ರಂದು ರೈಲು ತಡೆ.!

07:54 AM Mar 04, 2024 IST | Bcsuddi
Advertisement

 

Advertisement

ಚಂಡೀಗಢ: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್ಪಿ) ಕಾನೂನು ಖಾತರಿಗಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿರುವ ರೈತರು ಇದೇ 6ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ, ಇದೇ 10ರಂದು ದೇಶದಾದ್ಯಂತ ನಾಲ್ಕು ಗಂಟೆ ರೈಲು ತಡೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗಳಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಮತ್ತು ರೈತ ಕಾರ್ಮಿಕರು ಪಾಲ್ಗೊಳ್ಳಬೇಕು ಎಂದು ರೈತ ಮುಖಂಡರಾದ ಸರವಣ ಸಿಂಗ್ ಪಂಢೇರ ಮತ್ತು ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಭಾನುವಾರ ಕರೆ ನೀಡಿದ್ದಾರೆ.

ಖನೌರಿಯಲ್ಲಿ ಹರಿಯಾಣದ ಭದ್ರತಾ ಸಿಬ್ಬಂದಿಯೊಂದಿಗಿನ ಘರ್ಷಣೆಯಲ್ಲಿ ಇತ್ತೀಚೆಗೆ ಮೃತಪಟ್ಟ ರೈತ ಶುಭಕರಣ್ ಸಿಂಗ್ ಅವರ ಸ್ವಗ್ರಾಮವಾದ ಬಠಿಂಡಾ ಜಿಲ್ಲೆಯ ಬಲ್ಲೋಹ್ನಲ್ಲಿ ಈ ಇಬ್ಬರೂ ನಾಯಕರು ರೈತರನ್ನು ಉದ್ದೇಶಿಸಿ ಮಾತನಾಡಿದರು.

‘ಟ್ರ್ಯಾಕ್ಟರ್ ಟ್ರಾಲಿಗಳಲ್ಲಿ ತಲುಪಲು ಸಾಧ್ಯವಾಗದ ದೂರದ ರಾಜ್ಯಗಳ ರೈತರು, ರೈಲುಗಳಲ್ಲಿ ಮತ್ತು ಇತರ ಸಾರಿಗೆ ವ್ಯವಸ್ಥೆಯ ಮೂಲಕ ಇದೇ 6ರಂದು ದೆಹಲಿ ತಲುಪಬೇಕು. ಟ್ರ್ಯಾಕ್ಟರ್ ಟ್ರಾಲಿಗಳಿಲ್ಲದೆ ಬರುವ ರೈತರಿಗೆ ಸರ್ಕಾರವು ದೆಹಲಿ ಪ್ರವೇಶಿಸಲು ಅನುಮತಿ ನೀಡುತ್ತದೆಯೇ ಎಂಬುದು ಆಗ ಸ್ಪಷ್ಟವಾಗಲಿದೆ’ ಎಂದರು.

4 ಗಂಟೆ ರೈಲು ತಡೆ: ಮಾರ್ಚ್ 10ರಂದು ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ದೇಶದಾದ್ಯಂತ ರೈಲು ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಪಂಢೇರ ವಿವರಿಸಿದರು.

(ಸಾಂದರ್ಭಿಕ ಚಿತ್ರ)

Tags :
ರೈತರು ಇದೇ 6ರಂದು ದೆಹಲಿಯಲ್ಲಿ ಪ್ರತಿಭಟನೆ.! 10 ರಂದು ರೈಲು ತಡೆ.!
Advertisement
Next Article