ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರು ಗಮನಿಸ ಬೇಕಾದ ಅಂಶ.! ಪ್ರೂಟ್ ಐಡಿ ಕಡ್ಡಾಯ.!

07:28 AM Jun 11, 2024 IST | Bcsuddi
Advertisement

 

Advertisement

ಧಾರವಾಡ : ರಾಜ್ಯದಲ್ಲಿ ಉತ್ತಮ ಮಳೆ ಆಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಬೇಕು. ಸರಕಾರದಿಂದ ಕೃಷಿ ಸಂಬಂಧಿತ ಎಲ್ಲ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪ್ರೂಟ್ ಐಡಿ ಹೊಂದುವುದು ಕಡ್ಡಾಯವಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರೂಟ್ ಐಡಿ ಹೊಂದಲು ಜಿಲ್ಲೆಯಾದ್ಯಂತ ಅಭಿಯಾನ ಹಮ್ಮಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವರು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು. ಮುಂಗಾರು ಪೂರ್ವಕಾಲದಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ನಮ್ಮ ಜಿಲ್ಲೆಯ ರೈತರು ಮುಂಗಾರು ಆರಂಭಕ್ಕೂ ಮೊದಲೇ ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.

 

Advertisement
Next Article