For the best experience, open
https://m.bcsuddi.com
on your mobile browser.
Advertisement

ರೈತರ ದೆಹಲಿ ಚಲೋ ಪ್ರತಿಭಟನೆ: 2 ಪೊಲೀಸ್ ಅಧಿಕಾರಿಗಳ ಸಾವು

01:11 PM Feb 23, 2024 IST | Bcsuddi
ರೈತರ ದೆಹಲಿ ಚಲೋ ಪ್ರತಿಭಟನೆ  2 ಪೊಲೀಸ್ ಅಧಿಕಾರಿಗಳ ಸಾವು
Advertisement

ಹರಿಯಾಣ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ರೈತ ಸಂಘಟನೆಗಳು ಫೆಬ್ರವರಿ 13 ರಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಕೈಗೊಂಡಿದೆ. ಇದೀಗ ಹರಿಯಾಣದ ಅಂಬಾಲದಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 2 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ, 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಅಂಬಾಲಾ ಪೊಲೀಸರು ಪ್ರೆಸ್​ನೋಟ್ ಬಿಡುಗಡೆ ಮಾಡಿದ್ದಾರೆ. ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿರುವ ರೈತರು, ಬ್ಯಾರಿಕೇಡ್​ಗಳನ್ನು ಕಿತ್ತು ಹಾಕಲು ನಿರಂತರ ಪ್ರಯತ್ನವನ್ನು ಮಾಡುತ್ತಿದ್ದು, ಪೊಲೀಸರ ಮೇಲು ಕಲ್ಲುಗಳನ್ನು ಎಸೆಯುತ್ತಿದ್ದಾರೆ ಎಂದು ತಿಳಿದಿದ್ದಾರೆ.

ಇನ್ನು ರೈತರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗೆ ಕೂಡ ಹಾನಿಯುಂಟು ಮಾಡುತ್ತಿದ್ದಾರೆ. ಈ ಮೂಲಕ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವ ಪ್ರಯತ್ನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕರ ವಿರುದ್ಧ ಪೊಲೀಸರು ನ್ಯಾಷನಲ್ ಸೆಕ್ಯೂರಿಟಿ ಆ್ಯಕ್ಟ್ (NSA) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

Advertisement

Author Image

Advertisement