ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರಾಜಾಹುಲಿ

12:06 PM May 03, 2024 IST | Bcsuddi
Advertisement

ಬೆಂಗಳೂರು: ಲೋಕಸಭಾ ಚುನಾವಣಾ ಕಾವು ರಾಜ್ಯದಲ್ಲಿ ಜೋರಾಗಿದೆ. ಇತ್ತ ಏಪ್ರಿಲ್‌ 26 ರಂದು 14 ಲೋಕಸಭಾ ಕ್ಷೇತ್ರಗಳ ಚುನಾವಣೆ ನಡೆಸಿದ್ದು, ಬಾಕಿ 14 ಕ್ಷೇತ್ರಗಳ ಚುನಾವಣೆ ಮೇ 7 ರಂದು ನಡೆಯಲಿದೆ. ಇತ್ತ ಚುನಾವಣೆ ಹಿನ್ನೆಲೆ ಪ್ರಚಾರದ ಭರಾಟೆ ಜೋರಾಗಿದ್ದು, ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.

Advertisement

ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ ಅವರು, ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೇ ಕೆಲಸ ಮಾಡಿದ್ದಾರೆ. ತಮ್ಮ ತಾಯಿ ತಿರಿಕೊಂಡಾಗ ಅಂತ್ಯ ಸಂಸ್ಕಾರ ಮಾಡಿ ಮತ್ತೆ ಕರ್ತವ್ಯಕ್ಕೆ ಹಾಜರಿಯಾಗಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದದರ್ಭದಲ್ಲಿ ಕಾಂಗ್ರೆಸ್ ನ್ನು ವಿಸರ್ಜಿಸುವಂತೆ ಮಹಾತ್ಮಾ ಗಾಂಧಿಜಿ ಸೂಚಿಸಿದ್ಸರು. ಆಗ ಕಾಂಗ್ರೆಸ್ ವಿಸರ್ಜಿಸಲಿಲ್ಲ. ಈಗ ಜನರು ಮಹಾತ್ಮಾ ಗಾಂಧಿ ಯವರ ಆದೇಶ ಪಾಲನೆ ಮಾಡಿ ಕಾಂಗ್ರೆಸ್ ನ್ನು ನಿರ್ಮೂಲನೆ ಮಾಡುತ್ತಿದ್ದಾರೆ ಎಂದರು.

Advertisement
Next Article