For the best experience, open
https://m.bcsuddi.com
on your mobile browser.
Advertisement

ಲೈಂಗಿಕ ಕಿರುಕುಳ ಆರೋಪ; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಎಫ್‌ಐಆರ್

05:04 PM Sep 16, 2024 IST | BC Suddi
ಲೈಂಗಿಕ ಕಿರುಕುಳ ಆರೋಪ  ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಎಫ್‌ಐಆರ್
Advertisement

ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 21 ವರ್ಷದ ಯುವತಿಯೊಬ್ಬರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಯುವತಿ ನರಸಂಗಿ ನಿವಾಸಿಯಾಗಿರುವುದರಿಂದ ನರಸಂಗಿ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದ್ದು, ಕ್ರಿಮಿನಲ್ ಬೆದರಿಕೆ ಮತ್ತು ಸ್ವಯಂಪ್ರೇರಿತ ಗಾಯ ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement

Author Image

Advertisement