For the best experience, open
https://m.bcsuddi.com
on your mobile browser.
Advertisement

ಲೋಕಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ

07:43 AM May 01, 2024 IST | Bcsuddi
ಲೋಕಸಭಾ ಚುನಾವಣೆ  ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ
Advertisement

ಚಿತ್ರದುರ್ಗ: ಮೇ 7ರಂದು ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮತದಾನ ನಡೆಯಲಿರುವುದರಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮೇ 05 ರ ಸಂಜೆ 6 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12ರ ವರೆಗೆ ಚಿತ್ರದುರ್ಗ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ತರಹದ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೇ 07ರಂದು ಮತದಾನ ನಡೆಯಲಿರುವುದರಿಂದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿನ ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಗಡಿಭಾಗದಲ್ಲಿರುವ ಹೊಳಲ್ಕೆರೆ, ಚಳ್ಳಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರು ತಾಲ್ಲೂಕು ಗಡಿ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ಹಾಗೂ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮ 1967ರ ಅಧಿನಿಯಮ 10 (ಬಿ) ಪ್ರಕಾರ  ಮೇ 5 ರ ಸಂಜೆ 6 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12 ಗಂಟೆಯವರೆಗೆ ಹೊಳಲ್ಕೆರೆ, ಚಳ್ಳಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರು ತಾಲ್ಲೂಕು ಗಡಿಭಾಗಕ್ಕೆ ಹೊಂದಿಕೊಂಡಿರುವ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ತರಹದ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

Advertisement

Tags :
Author Image

Advertisement