ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆಗಳು ಅಂಗೀಕಾರ

11:14 AM Dec 21, 2023 IST | Bcsuddi
Advertisement

ನವದೆಹಲಿ: ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಗಳಿಗೆ ಇಂದು ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ ದೊರೆತಿವೆ.

Advertisement

ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಂಬ ಹೊಸ ಮಸೂದೆಗಳಿಗೆ ಅಂಗೀಕಾರ ಸಿಕ್ಕಿದೆ. ಇನ್ನು ಭಾರತೀಯ ದಂಡ ಸಂಹಿತೆ 1860, ಕ್ರಿಮಿನಲ್ ಪ್ರೊಸೀಜರ್ 1973 ಹಾಗೂ ಇಂಡಿಯನ್ ಎವಿಡೆನ್ಸ್ ಆಕ್ಟ್ 1872 ಎಂಬ ಮಸೂದೆಗಳ ಬದಲಿಗೆ ಈ ಹೊಸ ಮಸೂದೆಗಳನ್ನು ಮಂಡಿಸಲಾಗಿದೆ.

ಮಸೂದೆಗಳ ಕುರಿತ ಪ್ರಶ್ನೆಗಳಿಗೆ ಉತ್ತರಿದ ಅಮಿತ್ ಶಾ ಅವರು, ಹೊಸ ಮಸೂದೆಗಳು ಭಾರತೀಯತೆ, ಭಾರತೀಯ ಸಂವಿಧಾನ ಮತ್ತು ಜನರ ಯೋಗಕ್ಷೇಮಕ್ಕೆ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.

Advertisement
Next Article