ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕ ಸಮರಕ್ಕೂ ಮುನ್ನ INDIA ಮೈತ್ರಿ ಬಿರುಕು: ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಿಸಿದ ಮಮತಾ

02:42 PM Jan 24, 2024 IST | Bcsuddi
Advertisement

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದು, ಇದು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟುಮಾಡುವ ಸಾಧ್ಯತೆ ಇದೆ.

Advertisement

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈ ನಡುವೆ ಮುಂಬರುವ ಲೋಕಸಭೆ ಚುನಾವಣೆಗೆ ಟಿಎಂಸಿ, ಕಾಂಗ್ರೆಸ್ ಜೊತೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳದೇ ಪ.ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ ಎಂದು ಟಿಎಂಸಿ ವರಿಷ್ಠೆ ಇಂದು ಘೋಷಿಸಿದ್ದಾರೆ.

"ನಮಗೆ ಕಾಂಗ್ರೆಸ್‌ನೊಂದಿಗೆ ಯಾವುದೇ ಸಂಬಂಧವಿಲ್ಲ. ನಾವು ಏಕಾಂಗಿಯಾಗಿ ಹೋರಾಡುತ್ತೇವೆ. ಚುನಾವಣಾ
ಫಲಿತಾಂಶ ಪ್ರಕಟವಾದ ನಂತರವೇ ಕಾಂಗ್ರೆಸ್‌ನೊಂದಿಗೆ ಪ್ಯಾನ್-ಇಂಡಿಯಾ ಮೈತ್ರಿಯನ್ನು ಬಗ್ಗೆ ನಿರ್ಧಾರ ಮಾಡುತ್ತೇವೆ "ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ನ್ಯಾಯ ಯಾತ್ರೆ'ಗೆ ಇಂದು ಕೋಲ್ಕತ್ತಾಕ್ಕೆ ಪ್ರವೇಶಿಸಲಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಟಿಎಂಸಿ ವರಿಷ್ಠೆ ಕಾಂಗ್ರೆಸ್ ಗೆ ಇದಿರೇಟು ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ.

Advertisement
Next Article