ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಂಚನೆಯ ಉದ್ದೇಶ ಇಲ್ಲದ ಸಂಬಂಧವು ಅತ್ಯಾಚಾರವಲ್ಲ: ಹೈಕೋರ್ಟ್‌ ತೀರ್ಪು

11:22 AM Oct 16, 2024 IST | BC Suddi
Advertisement

ಆರಂಭದಿಂದಲೂ ವಂಚನೆಯ ಉದ್ದೇಶ ಇಲ್ಲದೇ ಇದ್ದರೆ, ಸಹಮತದ ಆಧಾರದ ವಿವಾಹೇತರ ದೈಹಿಕ ಸಂಬಂಧವು ಅತ್ಯಾಚಾರವಲ್ಲ ಎಂದು ಅಲಹಾಬಾದ್ ಹೈಕೋರ್ಟ್‌ ತೀರ್ಪು ನೀಡಿದೆ.

Advertisement

ಶ್ರೇಯ್ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್‌ನ ಅನೀಶ್ ಕುಮಾರ್ ಗುಪ್ತಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ತನ್ನ ಪತಿಯ ಮರಣದ ನಂತರ, ಮದುವೆ ಆಗುವ ಭರವಸೆ ನೀಡಿ ಶ್ರೇಯ್ ಅವರು ತನ್ನ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಸಂತ್ರಸ್ತ ಮಹಿಳೆ ಮೊರದಾಬಾದ್‌ನಲ್ಲಿ ದೂರು ದಾಖಲಿಸಿದ್ದರು. ಮದುವೆಯಾಗುವುದಾಗಿ ಮತ್ತೆ ಮತ್ತೆ ಭರವಸೆ ನೀಡಿ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದರು. ಆ ಬಳಿಕ ಮಾತಿಗೆ ತಪ್ಪಿದ ಶ್ರೇಯ್‌ ಬೇರೊಬ್ಬ ಮಹಿಳೆಯ ಜೊತೆಗೆ ಮದುವೆಯಾಗಿದ್ದಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ದೂರಿದ್ದರು.

ತನಗೆ 50 ಲಕ್ಷ ರೂ. ನೀಡದೇ ಇದ್ದರೆ, ಖಾಸಗಿ ಕ್ಷಣಗಳ ದೃಶ್ಯಗಳನ್ನು ಬಹಿರಂಗ ಪಡಿಸುತ್ತೇನೆ ಎಂದು ಶ್ರೇಯ್ ಬೆದರಿಕೆ ಒಡ್ಡಿದ್ದರು ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಸುಲಿಗೆ ಪ್ರಕರಣ ದಾಖಲಿಸಲಾಗಿತ್ತು.

Advertisement
Next Article