For the best experience, open
https://m.bcsuddi.com
on your mobile browser.
Advertisement

ವಚನ : --  -ಹಾವಿನಹಾಳ ಕಲ್ಲಯ್ಯ

07:33 AM Nov 21, 2023 IST | Bcsuddi
ವಚನ        ಹಾವಿನಹಾಳ ಕಲ್ಲಯ್ಯ
Advertisement

ಸಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಉದಕದ ತಂಪವ ತಾವರೆಯಲ್ಲದೆ ಹೊರಗಣ ಕೊರಡೆತ್ತಬಲ್ಲುದೊ ?

ಹೂವಿನ ಪರಿಮಳವ ತುಂಬಿಯಲ್ಲದೆ ಹೊರಗಣ ನೊಣನೆತ್ತಬಲ್ಲುದೊ ?

ಕ್ಷೀರದ ರುಚಿಯ ಹಂಸೆಯಲ್ಲದೆ ಕೆಲದಲ್ಲಿ ಬಕನೆತ್ತವಬಲ್ಲುದೊ ?

ಮಾವಿನ ಹಣ್ಣಿನ ರುಚಿಯನರಗಿಳಿಗಳು ಬಲ್ಲವಲ್ಲದೆ

ಹೊರಗಣ ಕೋಳಿಗಳೆತ್ತ ಬಲ್ಲವೊ ?

ಊಟದ ರುಚಿಯನು ನಾಲಗೆಯಲ್ಲದೆ ಕಲಸುವ ಕೈ ತಾನೆತ್ತ ಬಲ್ಲುದೊ?

ಕೂಟದ ಸುಖವನು ಯೌವನೆಯಲ್ಲದ ಬಾಲೆ ತಾನೆತ್ತ ಬಲ್ಲಳೊ ?

ಚಂದ್ರಸೂರ್ಯರಂತರಾಂತರವ ಖೇಚರರು ಬಲ್ಲರಲ್ಲದೆ

ಗಗನದೊಳಗಾಡುವ ಹದ್ದುಗಳು ತಾವೆತ್ತ ಬಲ್ಲವೊ ?

ಎಲೆ ಮಹಾಲಿಂಗ ಕಲ್ಲೇಶ್ವರಯ್ಯಾ.

ನಿಮ್ಮ ನಿತ್ಯನಿಜೈಕ್ಯರ ನಿಲುವನು ಮಹಾನುಭಾವಿಗಳು ಬಲ್ಲರಲ್ಲದೆ

ಲೋಕದ ಜಡಜೀವಿಗಳೆನಿಸುವ ಮಾನವರೆತ್ತ ಬಲ್ಲರೊ ?

-ಹಾವಿನಹಾಳ ಕಲ್ಲಯ್ಯ

Tags :
Author Image

Advertisement