ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಯನಾಡಿಗೆ ಭೇಟಿ ನೀಡಿದ ಪ್ರಧಾನಿ ಮೋದಿ, ವೈಮಾನಿಕ ಸಮೀಕ್ಷೆ

12:48 PM Aug 10, 2024 IST | BC Suddi
Advertisement

ವಯನಾಡು: ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೇರಳಕ್ಕೆ ಆಗಮಿಸಿದ್ದಾರೆ.

Advertisement

ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು. ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರ ಜೊತೆಗಿದ್ದಾರೆ.

ಇದಾದ ಬಳಿಕ ಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಮತ್ತು ಇತರ ಗಣ್ಯರೊಂದಿಗೆ ಭೂಕುಸಿತಕ್ಕೆ ಒಳಗಾದ ವಯನಾಡಿನ ಚೂರಲ್ ಮಾಲಾ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಧ್ವಂಸಗೊಂಡ ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಭೂಕುಸಿತ ದುರಂತದಲ್ಲಿ ೪೧೨ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

 

Advertisement
Next Article