ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವರ್ಕೌಟ್ ಬಳಿಕ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ರೆಕಾರ್ಡ್: ಜಿಮ್ ಕೋಚ್ ಅರೆಸ್ಟ್

09:02 AM Nov 10, 2023 IST | Bcsuddi
Advertisement

ಬೆಂಗಳೂರು: ಜಿಮ್ ನಲ್ಲಿ ವರ್ಕೌಟ್ ಮುಗಿಸಿದ ಬಳಿಕ ಫಿಟ್ನೆಸ್ ಸೆಂಟರ್ ನ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರಿಕರಣ ಮಾಡಿದ ಜಿಮ್ ಕೋಚ್ ನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ರಾಮನಗರದಲ್ಲಿ ನಡೆದಿದೆ.

Advertisement

ಜಿಮ್ ಕೋಚ್ ಸಿಬಿಯಾಚನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಯುವತಿ ಸ್ನಾನ ಮಾಡುತ್ತಿದ್ದಾಗ ಜಿಮ್ , ಕಿಟಕಿಯ ಮೂಲಕ ಮೊಬೈಲ್​ನಲ್ಲಿ ಸೆರೆ ಹಿಡಿಯುತ್ತಿದ್ದನು. ಈ ವೇಳೆ ಯುವತಿಗೆ ಅನುಮಾನ ಬಂದಿದೆ. ಹೊರಗೆ ಬಂದಾಗ ಪರಿಶೀಲಿದಾಗ ಅಲ್ಲಿ ಯಾರೂ ಇರಲಿಲ್ಲ. ಈ ಕುರಿತು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಕೋಚ್ ಸಿಬಿಯಾಚನ್ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಬಳಿಕ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಈ ಬಗ್ಗೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

Advertisement
Next Article