For the best experience, open
https://m.bcsuddi.com
on your mobile browser.
Advertisement

ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ : ಅರ್ಜಿ ಆಹ್ವಾನ

07:32 AM Sep 10, 2024 IST | BC Suddi
ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ   ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಸಂಬAಧ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿನ 20ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಸೆ.30 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳಿಗೆ ಸಲ್ಲಿಸಲು ತಿಳಿಸಿದೆ.

Advertisement

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ, ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
Author Image

Advertisement