ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು'- ಮುಖ್ಯಮಂತ್ರಿ ಸಿದ್ದರಾಮಯ್ಯ

06:41 PM Jul 05, 2024 IST | Bcsuddi
Advertisement

ಬೆಂಗಳೂರು:ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Advertisement

ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದರು. ಸಂಧಿಗಳ ಬಗ್ಗೆ ವಿದ್ಯಾರ್ಥಿಗಳನ್ನು ಪ್ರಶ್ನಿಸಿ ಬಳಿಕ ತಾವೇ ಉತ್ತರಿಸಿದರು. ಸಂಧಿ ಎಂದರೇನು, ಸಂಧಿಗಳಲ್ಲಿ ಎಷ್ಟು ವಿಧಗಳಿವೆ? ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ ಎಂದು ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು.

ಪ್ರವರ್ಗ, ಅಲ್ಪ ಪ್ರಾಣ-ಮಹಾ ಪ್ರಾಣದ ಬಗ್ಗೆ ಮಕ್ಕಳಿಗೆ ಪಾಠ ಮಾಡಿದರು. ಅಲ್ಲದೇ ಸ್ವರ-ದೀರ್ಘ ಸ್ವರದ ಬಗ್ಗೆಯೂ ಮಕ್ಕಳಿಗೆ ಸಿಎಂ ಪಾಠ ಮಾಡಿದ್ದು, ವ್ಯಂಜನಾಕ್ಷರ ಅಂದರೇನು, ವರ್ಗೀಯ-ಅವರ್ಗೀಯ ವ್ಯಂಜಗಳಿವೆ ಎಂದರು.

ಇದೇ ವೇಳೆ ಕರ್ನಾಟಕದಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಆರಂಭಿಸಿದ್ದು ಯಾರು ಎಂದು ಪ್ರಶ್ನಿಸಿದರು. ಇದಕ್ಕೆ ವಿದ್ಯಾರ್ಥಿಗಳು ನೀವೇ ಎಂದು ಉತ್ತರಿಸಿದರು. ಬಳಿಕ ಸಿಎಂ 1994-95ರಲ್ಲಿ ಮೊರಾರ್ಜಿ ದೇಸಾಯಿ ಆರಂಭಿಸಿದ್ದಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು. ಇದಕ್ಕೆ ಮಕ್ಕಳು ಚಪ್ಪಾಳೆ ತಟ್ಟಿ ಖುಷಿಪಟ್ಟರು

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ, ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.

ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

 

Advertisement
Next Article