For the best experience, open
https://m.bcsuddi.com
on your mobile browser.
Advertisement

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ.!

08:11 AM Dec 13, 2023 IST | Bcsuddi
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Advertisement

ದಾವಣಗೆರೆ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2024-2025ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

ಪರಿಶಿಷ್ಟ ಜಾತಿ, ಪ.ಪಂಗಡ ಮತ್ತು ಹಿಂದುಳಿದ ವರ್ಗದ ಪ್ರವರ್ಗ 1ರ ವಿದ್ಯಾರ್ಥಿಗಳಿಗೆ ರೂ.2,50,000 ಮತ್ತು ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ ರೂ.1,00,000 ಗಳ ಕುಟುಂಬದ ವಾರ್ಷಿಕ ಆದಾಯ ಮಿತಿ ಇರಬೇಕು. ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಘದ ವ್ಯಾಪ್ತಿಯಲ್ಲಿರುವ ಶಾಲೆ ಅಥವಾ ಕಾಲೇಜುಗಳ ಮೂಲಕ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದೆ. 2024ರ ಫೆ.18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್.ಕೆ ತಿಳಿಸಿದ್ದಾರೆ.

Tags :
Author Image

Advertisement