ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ

11:53 AM Nov 01, 2023 IST | Bcsuddi
Advertisement

ನವದೆಹಲಿ: ಸರ್ಕಾರ ಒಡೆತನದ ತೈಲ ಕಂಪನಿಗಳು ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 101.50 ರೂ.ಗಳಷ್ಟು ಹೆಚ್ಚಿಸಿವೆ.

Advertisement

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ. ಹೊಸ ದರ ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ಬೆಲೆಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯಿಸುತ್ತವೆ.

ಕಳೆದ ಅ. 1ರಂದು ತೈಲ ಕಂಪನಿಗಳು ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ದರದಲ್ಲಿ 209 ರೂ.ಗಳಷ್ಟು ಏರಿಕೆ ಮಾಡಿತ್ತು. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 100-103 ರೂ.ನಷ್ಟು ಹೆಚ್ಚಳವಾಗಿದೆ. ಇಂದಿನಿಂದ ದೆಹಲಿಯಲ್ಲಿ 1833 ರೂಪಾಯಿಗೆ 19ಕೆಜಿ ಎಲ್​ಪಿಜಿ ಸಿಲಿಂಡರ್ ದೊರಕಲಿದೆ.

Advertisement
Next Article