For the best experience, open
https://m.bcsuddi.com
on your mobile browser.
Advertisement

ವಾಯುಭಾರ ಕುಸಿತ.! ಬುಧವಾರದಿಂದ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ.!

08:00 AM Oct 14, 2024 IST | BC Suddi
ವಾಯುಭಾರ ಕುಸಿತ   ಬುಧವಾರದಿಂದ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ
Advertisement

ಬೆಂಗಳೂರು : ಬುಧವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. !

ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Tags :
Author Image

Advertisement