For the best experience, open
https://m.bcsuddi.com
on your mobile browser.
Advertisement

ವಾರ್ಷಿಕ ಅಮರನಾಥ ಯಾತ್ರೆ: ಇಂದು ಭದ್ರತಾ ಪರಿಶೀಲನೆ ನಡೆಸಲಿರುವ ಅಮಿತ್ ಶಾ

10:11 AM Jun 16, 2024 IST | Bcsuddi
ವಾರ್ಷಿಕ ಅಮರನಾಥ ಯಾತ್ರೆ  ಇಂದು ಭದ್ರತಾ ಪರಿಶೀಲನೆ ನಡೆಸಲಿರುವ ಅಮಿತ್ ಶಾ
Advertisement

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸ್ಥಿತಿ ಪರಿಶೀಲನೆ ನಡೆಸಲಿದ್ದು, ಇದರೊಂದಿಗೆ ವಾರ್ಷಿಕ ಅಮರನಾಥ ಯಾತ್ರೆಯ ತಯಾರಿಗಳನ್ನೂ ಇದೇ ವೇಳೆ ಪರಿಶೀಲನೆ ನಡೆಸಲಿದ್ದಾರೆ.

ಜೂನ್ 29ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆ ಸಚಿವ ಅಮಿತ್ ಶಾ ಅವರು ಇಂದು ಭದ್ರತಾ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಮಿತ್ ಶಾ ಅವರು ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಭಾಲ್, ಸೇನಾ ಪಡೆ ಮುಖ್ಯಸ್ಥ ಮನೋಜ್ ಪಾಂಡೆ, ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ದಳದ ನಿರ್ದೇಶಕತಾಪಕ್ ದೆಕಾ, ಸಿಆರ್‌ಪಿಎಫ್ ಮಹಾ ನಿರ್ದೇಶಕ ಅನೀಶ್ ದಯಾಳ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಆರ್.ಆರ್.ಸ್ಟೇಯ್ಸ್ ಹಾಗೂ ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

Advertisement

ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನುಸುಳುವಿಕೆ, ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಶಾ ಅವರು ನಿರ್ದೇಶನಗಳನ್ನು ನೀಡುವ ಸಾಧ್ಯತೆ ಇದೆ.

Author Image

Advertisement