ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 88 ಕೋಟಿ ಅಕ್ರಮ - ಎಂಡಿ, ಲೆಕ್ಕಾಧಿಕಾರಿ ಅಮಾನತು

01:22 PM May 30, 2024 IST | Bcsuddi
Advertisement

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ದುರುಪಯೋಗ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Advertisement

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್‌ ಮತ್ತು ಲೆಕ್ಕಾಧಿಕಾರಿ ಪರಶುರಾಮ್‌ ಜಿ.ದುರ್ಗಣ್ಣ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಗಮದ ಮುಖ್ಯ ಖಾತೆಯಲ್ಲಿ ಮೀಸಲಿಟ್ಟಿದ್ದ 187 ಕೋಟಿ ರೂ. ಮೊತ್ತದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೇ 88 ಕೋಟಿ ರೂ. ಹಣವನ್ನು ಅನ್ಯ ಖಾತೆಗೆ ವರ್ಗಾಯಿಸಿ ದುರುಪಯೋಗ ಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್‌ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ ಇಬ್ಬರು ಅಧಿಕಾರಿಗಳು ಮತ್ತು ಬ್ಯಾಂಕ್‌ ಉದ್ಯೋಗಿಯೊಬ್ಬರ ಹೆಸರನ್ನು ಉಲ್ಲೇಖಿಸಿದ್ದರು. ಅಕ್ರಮ ಹಣ ವರ್ಗಾವಣೆಗೆ ಇವರೇ ಕಾರಣ ಎಂದು ಆರೋಪಿಸಿದ್ದರು.

 

Advertisement
Next Article