For the best experience, open
https://m.bcsuddi.com
on your mobile browser.
Advertisement

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ವ್ಯವಸ್ಥಾಪಕ ನಿರ್ದೇಶಕ, ಲೆಕ್ಕಾಧಿಕಾರಿ ಎಸ್‌ಐಟಿ ವಶಕ್ಕೆ

02:53 PM Jun 01, 2024 IST | Bcsuddi
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ  ವ್ಯವಸ್ಥಾಪಕ ನಿರ್ದೇಶಕ  ಲೆಕ್ಕಾಧಿಕಾರಿ ಎಸ್‌ಐಟಿ ವಶಕ್ಕೆ
Advertisement

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ನಿಗಮದ ಲೆಕ್ಕಾಧಿಕಾರಿಯನ್ನು ವಿಶೇಷ ತನಿಖಾ ದಳ(ಎಸ್‌ಐಟಿ) ವಶಕ್ಕೆ ಪಡೆದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೀಗ ವಶಕ್ಕೆ ಪಡೆದಿರುವ ವ್ಯವಸ್ಥಾಪಕ ನಿರ್ದೇಶಕ ಎಸ್‌ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಪ್ರಸ್ತಾಪಿಸಿದರೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವ ಸಾಧ್ಯತರ ಹೆಚ್ಚಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದ್ದು, ಒಂದುವೇಳೆ ಎಸ್‌ಐಟಿ ಅಧಿಕಾರಿಗಳ ಮುಂದೆ ಅವರ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಂತೂ ನಿಶ್ಚಿತವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಅವರು ಸಚಿವ ನಾಗೇಂದ್ರ ಅವರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ. ಜೊತೆಗೆ ಪದ್ಮನಾಭ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಇನ್ನು ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಕೂಡ ಇದೆ.

Advertisement

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಡೆತ್‌ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ಉಲ್ಲೇಖಿಸಿದ್ದರು. ಇದೀಗ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

Author Image

Advertisement