ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ಅಧಿಕಾರಿಗಳ ವಶಕ್ಕೆ

10:00 AM Jul 12, 2024 IST | Bcsuddi
Advertisement

ಬೆಂಗಳೂರು: ವಾಲ್ಮೀಕಿ ನಿಗಮದ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಶಾಂತಿನಗರ ಇಡಿ ಕಚೇರಿಗೆ ಕರೆತಂದಿದ್ದಾರೆ. ಇನ್ನು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನು ಕೂಡ ವಶಕ್ಕೆ ಪಡೆಯಲು ಇಡಿ ತಂಡ ತೆರಳಿದೆ ಎನ್ನಲಾಗಿದೆ.

ಈಗಾಗಲೇ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದೆ. ಇದರ ಬೆನ್ನಲ್ಲೇ ಜುಲೈ 10ರಂದು ಇಡಿ ಮಾಜಿ ಸಚಿವ ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿತ್ತು.

ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರ ಮನೆ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಹಾಗೂ ಅವರ ಪಿಎ ಹರೀಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆತ ನೀಡಿದ ಕೆಲ ಮಾಹಿತಿಯ ಆಧಾರದ ಮೇರೆಗೆ ಇಂದು ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ.

 

Advertisement
Next Article