For the best experience, open
https://m.bcsuddi.com
on your mobile browser.
Advertisement

ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌- ಸಿಎಂ ಸ್ವಲ್ಪ ರಿಲೀಫ್

05:14 PM Aug 29, 2024 IST | BC Suddi
ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌  ಸಿಎಂ ಸ್ವಲ್ಪ ರಿಲೀಫ್
Advertisement

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ವಿಚಾರಣೆಯನ್ನು ಮತ್ತೆ ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಸ್ವಲ್ಪ ರಿಲೀಫ್ ಸಿಕ್ಕಂತಾಗಿದೆ.

ಈ ವಿಚಾರದ ಬಗ್ಗೆ ಹೈಕೋರ್ಟ್‌ನಲ್ಲಿ ಗುರುವಾರ ನಾಗಪ್ರಸನ್ನ ಅವರ ಏಕಪೀಠ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಆಗಸ್ಟ್‌ 31 ಕ್ಕೆ ಮುಂದೂಡಿದೆ. ಸಿಎಂ ಪರವಾಗಿ ವಾದ ಆರಂಭಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ , ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಕೇಳಿಬಂದ ಆರೋಪಗಳಿಗೆ ಯಾವುದೇ ಶೋಕಾಸ್‌ ನೋಟಿಸ್‌ ನೀಡದೆ ನೇರವಾಗಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದೆ.

ಜತೆಗೆ ರಾಜ್ಯಪಾಲರು ಸಚಿವ ಸಂಪುಟ ಸಭೆಯ ಸಲಹೆಯನ್ನು ಪಡೆಯದೇ ತರಾತುರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೊಟ್ಟಿದ್ದಾರೆ.ಆದುದರಿಂದ, ರಾಜ್ಯಪಾಲರ ಅನುಮತಿಯನ್ನು ರದ್ದು ಪಡಿಸಬೇಕು ಎಂದು ವಾದ ಮಂಡಿಸಿದರು. ರಾಜ್ಯಪಾಲರ ಪರವಾಗಿ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಅವರ ಆಕ್ಷೇಪಣೆಗೆ ನಾನು ಪ್ರತ್ಯುತ್ತರ ಸಲ್ಲಿಸಬೇಕಿದೆ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಾಜ್ಯಪಾಲರ ವಕೀಲ ತುಷಾರ್‌ ಮೆಹ್ತಾ, ಅರ್ಜಿದಾರರು ಎಲ್ಲಾ ದಾಖಲೆ ಸಲ್ಲಿಸಿದ್ದಾರೆ. ಸಿಂಘ್ವಿ ಅವರ ವಾದ ಆಲಿಸಿ, ಅಗತ್ಯಬಿದ್ದರೆ ರಾಜ್ಯಪಾಲರು ನಿರ್ಧಾರ ಮಾಡಿರುವ ಕಡತವನ್ನು ನ್ಯಾಯಾಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement