ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು - ಸುಪ್ರೀಂ ಮಹತ್ವದ ತೀರ್ಪು

01:47 PM Jul 10, 2024 IST | Bcsuddi
Advertisement

ನವದೆಹಲಿ:ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Advertisement

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಅರ್ಜಿ ವಜಾಗೊಳಿಸಿದೆ. ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ.

ಸೆಕ್ಷನ್ 125 ವಿವಾಹಿತ ಮಹಿಳೆಯರಿಗೆ ಮಾತ್ರವಲ್ಲ, ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ. ಈ ಪ್ರಮುಖ ತೀರ್ಮಾನದೊಂದಿಗೆ ನಾವು ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿ ನಾಗರತ್ನ ತಿಳಿಸಿದ್ದಾರೆ. ಜೀವನಾಂಶ ದಾನವಲ್ಲ, ವಿವಾಹಿತ ಮಹಿಳೆಯರ ಹಕ್ಕು ಎಂದು ನ್ಯಾಯಾಲಯ ಹೇಳಿದೆ.

 

Advertisement
Next Article