ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಮ್ಯಾನ್ಯುಯಲ್ ಮತ್ತು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು. ಮ್ಯಾನ್ಯುಯಲ್ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್‍ಗಳಿಗೆ ಸಲ್ಲಿಸಲು ಸೂಚಿಸಿದೆ.
ಷರತ್ತುಗಳು : ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ದಾಖಲಾಗಲು, ವಿದ್ಯಾರ್ಥಿಯ ಎಸ್‍ಎಟಿಎಸ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ಆಧಾರ್ ಕಾರ್ಡ್, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಜೆರಾಕ್ಸ್ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಎನ್‍ಪಿಸಿಐ ಗೆ ಜೋಡಣೆ ಮಾಡಿರಬೇಕು.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ದಾಖಲಾಗಲು, ವಿದ್ಯಾರ್ಥಿಯ ಕಾಲೇಜ್ ದಾಖಲಾತಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ದೂರದ ಪ್ರಾಯಾಣ ಪತ್ರ (ಕಿಲೋಮೀಟರ್ ಸರ್ಟಿಫಿಕೇಟ್), ಎಸ್.ಎಸ್.ಪಿ ವಿವರಗಳು ಹಾಗೂ ಇತರೆ ಅಗತ್ಯ ದಾಖಲಾತಿಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು.
ಎಲ್ಲ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಅರ್ಜಿಯನ್ನು ಸಂಬಂಧಿಸಿದ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ ವಾರ್ಡನ್ ಅವರಿಗೆ ಸಲ್ಲಿಸಲು ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ತಿಳಿಸಿದ್ದಾರೆ.