ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

07:49 AM Aug 31, 2024 IST | BC Suddi
Advertisement

 

Advertisement

ಚಿತ್ರದುರ್ಗ: 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ (ಎಸ್‌ಎಸ್‌ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ವೆಬ್‌ಸೈಟ್  https://ssp.postmatric.karnata.gov.in        ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ  https://ssp.postmatric.karnataka.gov.in/ssppre/     ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ, ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು-9742725576, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Tags :
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Advertisement
Next Article