For the best experience, open
https://m.bcsuddi.com
on your mobile browser.
Advertisement

ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

07:48 AM Aug 14, 2024 IST | BC Suddi
ವಿದ್ಯಾಸಿರಿ  ಶುಲ್ಕ ಮರುಪಾವತಿ  ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Advertisement

 ದಾವಣಗೆರೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ,  ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು  https://ssp.postmatric.karnataka.gov.in      ಮೂಲಕ  ಆನ್‍ಲೈನ್  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

Advertisement

ಹೆಚ್ಚಿನ ಮಾಹಿತಿಗಾಗಿ  https://bcwd.karnataka.gov.in     ವೆಬ್‍ಸೈಟ್‍ನ್ನು ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ  bcwdhelpline@gmail.com,    1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

“ ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.”

Tags :
Author Image

Advertisement