ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ವಿಧಾನಸೌಧದ 4 ಗೇಟ್ ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ'- ಗೃಹ ಸಚಿವ ಪರಮೇಶ್ವರ್

05:20 PM May 17, 2024 IST | Bcsuddi
Advertisement

ಬೆಂಗಳೂರು: 2 ರಿಂದ 3 ಕೋಟಿ ರೂ. ಹಣ ಖರ್ಚು ಮಾಡಿ ವಿಧಾನಸೌಧದ 4 ಗೇಟ್ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗುತ್ತದೆ. ಜೊತೆಗೆ ವಿಧಾನ ಸೌಧಕ್ಕೆ ಬರುಬೇಕು ಅಂದರೆ ಇನ್ನು ಮುಂದೆ ಕ್ಯೂಆರ್​ ಕೋಡ್ ಇರುವ ಪಾಸ್​ಗಳನ್ನು ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್ ಗಳಿರಲಿಲ್ಲ. ಹಾಗಾಗಿ ಇಂದು ನಾಲ್ಕು ಗೇಟ್ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ. ವಿಧಾನ ಸೌಧದಲ್ಲಿ ಯಾರಾದರೂ ಲೋಹದ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್​​ನಲ್ಲಿ ಗೊತ್ತಾಗುತ್ತದೆ. ಮೂರು ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಕೆಟ್ಟಿದ್ದವು. ಈಗ ಸಿಎಂ ಸಿದ್ದರಾಮಯ್ಯ ಅವರು ಹಣ ಬೀಡುಗಡೆಗೊಳಿಸಿದ ಬಳಿಕ ಈ ಬ್ಯಾಗೇಜ್ ಸ್ಕ್ಯಾನರ್ ತೆಗೆದುಕೊಂಡು ಬಂದಿದ್ದೇವೆ ಎಂದು ಹೇಳಿದರು.

ವಿಧಾನ ಸೌಧದಲ್ಲಿ ಸೆಕ್ಯೂರಿಟಿ ಇನ್ನು ಹೆಚ್ಚು ಮಾಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಇನ್ನು ಮುಂದೆ ವಿಧಾನ ಸೌಧ ಪ್ರವೇಶ ಮಾಡಲು ಬೇಕಾಬಿಟ್ಟಿ ಪಾಸ್ ಗಳನ್ನು ನೀಡುವುದಿಲ್ಲ ಎಂದರು.

 

Advertisement
Next Article