ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ - ಮೇ 31ಕ್ಕೆ ಬೆಂಗಳೂರಿಗೆ?

10:18 AM May 29, 2024 IST | Bcsuddi
Advertisement

ಹಾಸನ: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿ ಆಗಿರುವ ಸಂಸದ ಪ್ರಜ್ವಲ್ ರೇವಣ್ಣ ತಾವು ವಿದೇಶದಿಂದ ವಾಪಸ್ ಬರುತ್ತಿರುವ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅದರಂತೆ ಭಾರತಕ್ಕೆ ಬರುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಎರಡು ಬಾರಿ‌ ಟಿಕೆಟ್ ಬುಕ್ ಮಾಡಿ, ಭಾರತಕ್ಕೆ ಬಾರದೇ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಪ್ರಜ್ವಲ್ ರೇವಣ್ಣ, ಇದೀಗ ಮೇ 30 ರಂದು ಜರ್ಮಿನಿಯ ಮ್ಯೂನಿಚ್‌ನಿಂದ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಮತ್ತೆ ಮ್ಯೂನಿಚ್‌ನಿಂದ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಸತತ 9 ಘಂಟೆಗಳ ಜರ್ನಿ ಮಾಡಿ, 31 ರ ತಡರಾತ್ರಿ 12:30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಮ್ಯೂನಿಚ್‌ನಿಂದ ಮೇ 30 ನೇ ತಾರೀಖು ಸಂಜೆ ಹೊರಡುವ ಸಾಧ್ಯತೆಯಿದ್ದು, ಮಧ್ಯರಾತ್ರಿ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಟಿಕೆಟ್ ಕಾಯ್ದಿಯಿರಿಸಿದ್ದಾರೆ. Lufthansa airlines ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಮೂಲಗಳಿಂದ ಲಭ್ಯವಾಗಿದೆ.

Advertisement

Advertisement
Next Article