ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದಿನಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

09:51 AM Nov 20, 2023 IST | Bcsuddi
Advertisement

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ಮಾಡಲಿದ್ದಾರೆ. ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲಿದ್ದಾರೆ. ಬೆಂಗಳೂರಿನ 2877 ಅಂಗನವಾಡಿ ಕೇಂದ್ರಗಳಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ. ಕಳೆದ ಮಾರ್ಚ್ 5 ರಂದು ಭೌತಿಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ 8 ತಿಂಗಳು ಕಳೆದರು ಇಲಾಖೆಯ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಹಾಗಾಗಿ ಬೇಡಿಕೆ ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.

Advertisement

Advertisement
Next Article