ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ಶಾಲೆ ಬಂದ್.!

07:50 AM Aug 12, 2024 IST | BC Suddi
Advertisement

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಇಂದು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.

Advertisement

ಬಹುತೇಕ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸುವುದರಿಂದ ತರಗತಿ ಚಟುವಟಿಕೆಗಳು ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಆಗಮಿಸಲು ಶಿಕ್ಷಕರಿಗೆ ಮನವಿ ಮಾಡಲಾಗಿದೆ.

2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸೋಮವಾರ ಬೆಳಗ್ಗೆ 10.30 ರಿಂದ ಸಂಜೆ 5:00 ವರೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.

 

Tags :
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ಶಾಲೆ ಬಂದ್.!
Advertisement
Next Article