ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿಶ್ವಾಸಮತ ಪರೀಕ್ಷೆಯಲ್ಲಿ ಗೆಲುವು ಸಾಧಿಸಿದ ಹೇಮಂತ್ ಸೊರೇನ್ ಸರ್ಕಾರ

02:49 PM Jul 08, 2024 IST | Bcsuddi
Advertisement

ರಾಂಚಿ: ಜಾರ್ಖಂಡ್ ವಿಧಾನಸಭೆಯಲ್ಲಿ ಹೇಮಂತ್ ಸೊರೇನ್ ಸರ್ಕಾರವು ವಿಶ್ವಾಸಮತ ಪರೀಕ್ಷೆಯಲ್ಲಿ ಗೆಲುವು ಸಾಧಿಸಿದೆ.

Advertisement

81 ಸಂಖ್ಯಾಬಲ ಇರುವ ಜಾರ್ಖಂಡ್ ವಿಧಾನಸಭೆಯಲ್ಲಿ 45 ಶಾಸಕರು ಹೇಮಂತ್ ಸೊರೇನ್ ಸರ್ಕಾರದ ಪರ ವಿಶ್ವಾಸಮತ ಚಲಾಯಿಸಿದರು. ಪಕ್ಷೇತರ ಶಾಸಕ ಸರಯೂ ರಾಯ್ ಅವರು ವಿಶ್ವಾಸ ಮತ ಪ್ರಕ್ರಿಯೆಹಿಂದ ಹೊರಗುಳಿದರು. ಇನ್ನು ವಿಶ್ವಾಸಮತ ಸಾಬೀತಿಗೂ ಮುನ್ನವೇ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದವು.

ಅಕ್ರಮ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳಿಂದ ಬಂಧಿತರಾಗಿದ್ದ ಹೇಮಂತ್ ಸೊರೆನ್ ಅವರು ಜಾಮೀನು ಪಡೆದು ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜಾಮೀನು ಪಡೆದ ಬೆನ್ನಲ್ಲೇ ಹೇಮಂತ್ ಸೊರೆನ್ ಅವರು ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು

 

Advertisement
Next Article