ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಕೋಟಾದಡಿ ಅರ್ಜಿ ಆಹ್ವಾನ

07:16 AM Jun 16, 2024 IST | Bcsuddi
Advertisement

 

Advertisement

ಚಿತ್ರದುರ್ಗ: 2024-25ನೇ ಪ್ರಸಕ್ತ ಸಾಲಿಗೆ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಆಧ್ಯತೆಯ ಮೇರೆಗೆ ಕೇಂದ್ರಿಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದೆ.

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)  ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲತಾಣದಲ್ಲಿ  ಜುಲೈ 9ರೊಳಗಾಗಿ ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯಿಂದ ಪಡೆದ ದೃಡೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕೇಂದ್ರಿಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN ನಲ್ಲಿ ಅಥವಾ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags :
ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಕೋಟಾದಡಿ ಅರ್ಜಿ ಆಹ್ವಾನ
Advertisement
Next Article