ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಹೈಕೋರ್ಟ್ ನಿರ್ದೇಶನ

01:59 PM Jan 06, 2024 IST | Bcsuddi
Advertisement

ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರವು ರೂಪಿಸಿದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಹೈಕೋರ್ಟ್ ನಿರ್ದೇಶಿಸಿದ್ದು, ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

Advertisement

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಅರ್ಜಿಯನ್ನು ಸಲ್ಲಿಸಿದ್ದರು.

ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಆಪರೇಟರ್‌ಗಳ ಸಂಕಷ್ಟ ಪ್ರಾರಂಭವಾಗಿದೆ. ಹಾಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯ ಮಾಡಬೇಕು.

ಸರ್ಕಾರಿ ಬಸ್‌ಗಳಂತೆ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಪ್ರಯಾಣ ವೆಚ್ಚವನ್ನು ಸರ್ಕಾರ ಖಾಸಗಿ ಬಸ್ ಆಪರೇಟರ್‌ಗಳಿಗೆ ಮರು ಪಾವತಿ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ 2023ರ ಜುಲೈ 26ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

75 ಸಾವಿರ ಕಾರ್ಮಿಕರು ರಾಜ್ಯದಲ್ಲಿ ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದು ಖಾಸಗಿ ಬಸ್ ಆಪರೇಟರ್‌ಗಳಿಂದ ವಾರ್ಷಿಕ 1,620 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ.

Advertisement
Next Article