For the best experience, open
https://m.bcsuddi.com
on your mobile browser.
Advertisement

ಶಬರಿಮಲೆ ಯಾತ್ರಾರ್ಥಿಗಳ ವಾಹನಕ್ಕೆ ರಿಕ್ಷಾ ಡಿಕ್ಕಿ: ಮಕ್ಕಳು ಸೇರಿ ಐವರು ಮೃತ್ಯು

11:44 AM Dec 16, 2023 IST | Bcsuddi
ಶಬರಿಮಲೆ ಯಾತ್ರಾರ್ಥಿಗಳ ವಾಹನಕ್ಕೆ ರಿಕ್ಷಾ ಡಿಕ್ಕಿ  ಮಕ್ಕಳು ಸೇರಿ ಐವರು ಮೃತ್ಯು
Advertisement

ಕೇರಳ: ಕೇರಳದ ಮಂಚೇರಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿರುವ ಪರಿಣಾಮ ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Author Image

Advertisement