ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

 ಶರಣೆ ಅಕ್ಕಮ್ಮ ಅವರ ವಚನ ……

07:14 AM Mar 21, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮನಮುಟ್ಟದ ವ್ರತ, ತನುಮುಟ್ಟದ ಸುಖ,

ಬೇರುಮುಟ್ಟದ ಸಾರ ಅದಾರಿಗೆ ಯೋಗ್ಯ

ಮನ ವಚನ ಕಾಯ ತ್ರಿಕರಣ ಏಕವಾಗಿ

ಅಂಗಕ್ಕೆ ಆಚಾರ, ಆಚಾರಕ್ಕೆ ಅರಿವು, ಅರಿವಿಂಗೆ ಕುರುಹು,

ಕುರುಹಿನಲ್ಲಿ ನೇಮಕ್ಕೊಡಲಾಗಿ, ಭಾವಕ್ಕೆ ರೂಪಾಗಿ,

ಬಾವಿಯ ನೀರ ಕುಂಭ ತಂದುಕೊಡುವಂತೆ,

ಮಹಾಜ್ಞಾನ ಸುಖಜಲವ ಜ್ಞಾತೃವೆಂಬ ಕಣ್ಣಿಗೆ

ಜ್ಞೆೀಯವೆಂಬ ಕುಂಭದಲ್ಲಿ ಭಾವವೆಂಬ ಜಲ ಬಂದಿತ್ತು.

ಆ ಸುಜಲದಿಂದ ಅಂಗವೆಂಬ ಲಿಂಗಕ್ಕೆ ಮಜ್ಜನಕ್ಕೆರೆದೆ

ಪ್ರಾಣಲಿಂಗಕ್ಕೆ ಓಗರವನಟ್ಟೆ,

ಮಹಾಘನವೆಂಬ ತೃಪ್ತಿಲಿಂಗ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ನೇಮ ಸಂದಿತ್ತು.

 

-ಅಕ್ಕಮ್ಮ

Tags :
ಶರಣೆ ಅಕ್ಕಮ್ಮ ಅವರ ವಚನ ……
Advertisement
Next Article