For the best experience, open
https://m.bcsuddi.com
on your mobile browser.
Advertisement

ಶಾಸಕ ಮುನಿರತ್ನಗೆ ಅ. 19ರವರೆಗೆ ನ್ಯಾಯಾಂಗ ಬಂಧನ

01:16 PM Oct 05, 2024 IST | BC Suddi
ಶಾಸಕ ಮುನಿರತ್ನಗೆ ಅ  19ರವರೆಗೆ ನ್ಯಾಯಾಂಗ ಬಂಧನ
Advertisement

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ ಮುಂದೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚನೆ ನೀಡಿದೆ. ಒಂದು ವೇಳೆ ಜೈಲು ಅಧಿಕಾರಿಗಳು ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.

Advertisement

Author Image

Advertisement