ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಶಾಸಕ ಮುನಿರತ್ನ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು'- ಡಿಕೆ ಸುರೇಶ್

01:39 PM Sep 14, 2024 IST | BC Suddi
Advertisement

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅವರು ಹೇಳಿದರು.

Advertisement

ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೀವ ಬೆದರಿಕೆ, ಜಾತಿ ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪ ಮಾಡಿರುವ ಬಗ್ಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಚುನಾವಣೆ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗೂ ಬೆದರಿಕೆ ಹಾಕಿದ್ದರು. ಶಾಸಕ ಮುನಿರತ್ನರಿಂದ ಅಧಿಕಾರಿಗಳಂತೂ ಭಯ ಭೀತರಾಗಿದ್ದಾರೆ. ಕೆಲವು ಅಧಿಕಾರಿಗಳು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳು ದೂರು ಕೊಟ್ಟರೆ ಸರ್ಕಾರ ಅವರ ರಕ್ಷಣೆಗೆ ಬರುತ್ತೆ ಎಂದರು.

ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದು ಕಿಡಿ ಕಾರಿದರು.

ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ ಇಂತಹ ಪದ ಬಳಸುವುದಿಲ್ಲ. ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಅದೇ ತಾಯಂದಿರನ್ನು ಮಂಚಕ್ಕೆ ಕರೆಯುವ ಜಪ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article