For the best experience, open
https://m.bcsuddi.com
on your mobile browser.
Advertisement

ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

02:38 PM May 31, 2024 IST | Bcsuddi
ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
Advertisement

ಬೆಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಘಟನೆಗೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಎಂದು ಪ್ರಶ್ನಿಸಿದೆ.

ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು? ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಹೊರತುಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ತಿಳಿಸಿದೆ.

Advertisement

Author Image

Advertisement