ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಸಕಲೇಶಪುರ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲಿ ರಸ್ತೆ

03:30 PM Jul 18, 2024 IST | Bcsuddi
Advertisement

ಮಂಗಳೂರು: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

Advertisement

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.

Advertisement
Next Article