ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶ್ರೀಮಠದ ಆಸ್ತಿ ಸಂರಕ್ಷಿಸಲು ನಾವು ಬದ್ಧರಾಗಿದ್ದೇವೆ: ಶ್ರೀ ಶಿವಯೋಗಿ ಸಿ. ಕಳಸ.!

07:41 AM Jul 18, 2024 IST | Bcsuddi
Advertisement

 

Advertisement

ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಕಾಣೆಯಾದ ಮೂರ್ತಿ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಾವುಗಳು ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರವನ್ನು ನೀಡಿದ್ದು, ಶ್ರೀಮಠದ ಆಸ್ತಿ ಸಂರಕ್ಷಿಸಲು ನಾವು ಬದ್ಧರಾಗಿದ್ದೇವೆ. ಎಂದು ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ. ಕಳಸದರವರು ತಿಳಿಸಿದರು.

ಶ್ರೀಮಠದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಜವಾಬ್ದಾರಿಯಿಂದ ಕೆಲಸ ಮಾಡಲು ನಮ್ಮೊಂದಿಗೆ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಕೇಳಿz್ದÉÃವೆ. ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇದರ ಹಿಂದೆ ಕಾಣದ ಕೈಗಳು ಯಾವುವು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಶ್ರೀಮಠದ ಪರವಾಗಿ ಭಕ್ತರು ನಮ್ಮೊಂದಿಗೆ ಇದ್ದಾರೆ ಎಂದರು.

ಕಳೆದ ಮರ‍್ನಾಲ್ಕು ತಿಂಗಳ ಅವಧಿಯಲ್ಲಿ ಸರ್ಕಾರ ಸಮಿತಿ ರಚಿಸಿ ಆದೇಶಿಸಿತ್ತು. ಅದರ ಪ್ರಕಾರ ಆಡಳಿತ ನೋಡಿಕೊಳ್ಳುತ್ತಿದ್ದು, ಶ್ರೀಮಠದ ಆಸ್ತಿ, ಶಾಖಾಮಠಗಳ ಆಸ್ತಿಗಳ ಕುರಿತು ಚರ್ಚಿಸಲಾಗಿದೆ. ಹಾಸನ, ಕೊಡಗು, ರಾಣೇಬೆನ್ನೂರು, ಧಾರವಾಡ, ಮಹಾರಾಷ್ಟçದ ಕೊಲ್ಲಾಪುರ ಮಠದ ಬಗ್ಗೆ ಚರ್ಚಿಸಿz್ದÉÃವೆ. ಹಲವಾರು ಒಳ್ಳೆಯ ಸಲಹೆಗಳು ಬಂದಿವೆ. ಶ್ರೀಮಠದ ಪರಂಪರೆಯನ್ನು ಮುಂದುವರಿಸಬೇಕಿದೆ. ವಿದ್ಯಾಪೀಠದ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಆಡಳಿತ ಮಂಡಳಿಯು ಅಧಿಕೃತವಾಗಿ ಜವಾಬ್ದಾರಿಯನ್ನು ನಿಭಾಯಿಸುತ್ತದೆ. ಇದರ ಹಿಂದೆ ಕಾಣದ ಕೈಗಳು ಏನು ಮಾಡುತ್ತಿವೆ ಎಂಬುದನ್ನು ಕಂಡುಹಿಡಿಯಬೇಕಿದೆ.  ಶ್ರೀಮಠದ ಬಗ್ಗೆ ವೈಯಕ್ತಿಕವಾಗಿ ನನಗೆ ಬಹಳ ಗೌರವವಿದೆ. ಇದರ ಆಶೀರ್ವಾದ ನನ್ನ ಮೇಲಿದೆ. ಪ್ರತಿನಿತ್ಯ ನಾವುಗಳು ಇದರ ಆಗುಹೋಗುಗಳ ಬಗ್ಗೆ ಚರ್ಚಿಸುತ್ತೇವೆ. ಅನೇಕ ಪ್ರಕರಣಗಳು ಕಾನೂನು ಅಡಿಯಲ್ಲಿವೆ. ಭಕ್ತರ ಅಪೇಕ್ಷೆಯಂತೆ ಹೆಚ್ಚು ಸಮಯ ಕಳೆಯಲು ಇಚ್ಚಿಸುತ್ತೇವೆ. ಕೊಡಗಿನಲ್ಲಿ ಸಾಕಷ್ಟು ಸಮಸ್ಯೆ ಇದೆ. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿz್ದÉÃವೆ. ವಿದ್ಯಾಪೀಠ, ಮಠದ ಜವಾಬ್ದಾರಿಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಲಾಗಿದೆ. ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಹಾಗೂ ವಾರ್ಷಿಕ ಬಜೆಟ್‌ನ್ನು ಮಂಡಿಸುತ್ತೇವೆ ಎಂದು ನುಡಿದರು.

ಗೋಷ್ಠಿಯಲ್ಲಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ವಕೀಲರಾದ ಉಮೇಶ್ ಇದ್ದರು.

Tags :
ಶ್ರೀಮಠದ ಆಸ್ತಿ ಸಂರಕ್ಷಿಸಲು ನಾವು ಬದ್ಧರಾಗಿದ್ದೇವೆ: ಶ್ರೀ ಶಿವಯೋಗಿ ಸಿ. ಕಳಸ.!
Advertisement
Next Article