ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶ್ರೀರಾಮಚಂದ್ರನನ್ನು ರಾಜಕೀಯ ವಿಷಯ ಮಾಡಿರುವುದನ್ನು ವಿರೋಧಿಸುತ್ತೇವೆ: ಸಿಎಂ

05:38 PM Jan 11, 2024 IST | Bcsuddi
Advertisement

ಬೆಂಗಳೂರು: ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು.

ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದರು.

ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ:

ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಲ್ಲಿಯೂ ಪೂಜೆ ನಡೆಯಲಿದೆ ಎಂದರು.

Advertisement
Next Article