For the best experience, open
https://m.bcsuddi.com
on your mobile browser.
Advertisement

ಶ್ರೀ ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ಕೊಟ್ಟಿದ್ದೇನೆ: ಡಾ.ಜಿ.ಪರಮೇಶ್ವರ್

04:43 PM Jan 08, 2024 IST | Bcsuddi
ಶ್ರೀ ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ಕೊಟ್ಟಿದ್ದೇನೆ  ಡಾ ಜಿ ಪರಮೇಶ್ವರ್
Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಣಿಗೆ ನಾನೂ ಕೂಡಾ ಕೊಟ್ಟಿದ್ದೇನೆ, ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದಿದ್ದಾರೆ.

ನಾವು ಕೂಡಾ ಹಿಂದುಗಳೇ, ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ

ಇನ್ನೊಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರವೂ ಜ. 22 ರಂದು .ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದೆ.

Advertisement

Author Image

Advertisement