ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಂಡೂರಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ..!

06:01 PM Oct 22, 2024 IST | BC Suddi
Advertisement

ಮೈಸೂರು : ರಾಜ್ಯದಲ್ಲಿ ಉಪಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. BJP-JDS ಮೈತ್ರಿ ಪಕ್ಷಗಳು ಈಗಾಗಲೇ 2 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ.

Advertisement

ಈಗ ಕಾಂಗ್ರೆನ್ ಸಹ ಸಂಡೂರು ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಮಾಡಿದೆ. ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಕಣಕ್ಕಿಳಿಯಲಿದ್ದಾರೆ ಎಂದು CM ಸಿದ್ದರಾಮಯ್ಯ ಘೋಷಿಸಿದ್ದಾರೆ. ಆದರೆ ಚನ್ನಪಟ್ಟಣ & ಶಿಗ್ಗಾಂವಿ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಾಹಿತಿ ನೀಡಿದ್ದಾರೆ. ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಹೇಳಿದರು. ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement
Next Article