ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಂತ್ರಸ್ತೆ ಅಪರಹರಣ ಪ್ರಕರಣ : ಭವಾನಿ ರೇವಣ್ಣಗೆ ಬಿಗ್ ರಿಲೀಫ್

11:56 AM Oct 18, 2024 IST | BC Suddi
Advertisement

ನವದೆಹಲಿ :ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಜಾಮೀನು ವಿಚಾರವಾಗಿ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಶುಕ್ರವಾರ ಹೇಳಿದೆ. ಈ ಮೂಲಕ ಭವಾನಿ ರೇವಣ್ಣ ಕೊಂಚ ನಿರಾಳರಾಗಿದ್ದಾರೆ.

Advertisement

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿತ್ತು. ಜಾಮೀನಿಗೂ ತಡೆಯಾಜ್ಞೆ ನೀಡುವ ಬಗ್ಗೆ ಚರ್ಚೆಯಾಗಿತ್ತು, ಈ ವಿಚಾರವಾಗಿ ಭವಾನಿ ರೇವಣ್ಣಗೆ ನೀಡಿರುವ ಜಾಮೀನಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂಬುವುದಾಗಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ಪ್ರಕರಣದ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಕೆಲವೊಂದು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂಬುವುದಾಗಿ ಸುಪ್ರೀಂ ಹೇಳಿದೆ.

 

Advertisement
Next Article