ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಂತ್ರಸ್ತ ಮಹಿಳೆಯರ ನೆರವಿಗೆ ನಿಲ್ಲುವಂತೆ ಸಿಎಂಗೆ ಪತ್ರ ಬರೆದ ರಾಹುಲ್ ಗಾಂಧಿ

04:41 PM May 04, 2024 IST | Bcsuddi
Advertisement

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತ ಮಹಿಳೆಯರ ನೆರವಿಗೆ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಹಾಸನದ ಹಾಲಿ ಸಂಸದರ ಭೀಕರ ಲೈಂಗಿಕ ದೌರ್ಜನ್ಯದ ಬಗ್ಗೆ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಪ್ರಜ್ವಲ್ ರೇವಣ್ಣ ಹಲವಾರು ವರ್ಷಗಳಿಂದ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ಚಿತ್ರೀಕರಿಸಿದ್ದಾರೆ. ಅವರನ್ನು ಸಹೋದರ ಮತ್ತು ಮಗನಂತೆ ನೋಡುತ್ತಿದ್ದ ಅನೇಕರನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ನಮ್ಮ ತಾಯಂದಿರು ಮತ್ತು ಸಹೋದರಿಯರ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಸಂಭವನೀಯ ಶಿಕ್ಷೆಯಾಗಬೇಕಿದೆ ಎಂದು ತಿಳಿಸಿದ್ದಾರೆ.

ಪ್ರಜ್ವಲ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಿ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಅನೇಕರನ್ನ ಕ್ರೂರವಾಗಿ ಪ್ರಜ್ವಲ್ ನಡೆಸಿಕೊಂಡಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Next Article