ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಂಸತ್ತಿನಲ್ಲಿ ಹೊಗೆ ದಾಳಿ ಪ್ರಕರಣ : ಐವರ ಮಂಪರು ಪರೀಕ್ಷೆಗೆ ಕೋರ್ಟ್‌ ಸಮ್ಮತಿ

11:41 AM Jan 06, 2024 IST | Bcsuddi
Advertisement

ನವದೆಹಲಿ:ಸಂಸತ್ತಿನಲ್ಲಿ ನಡೆದ ಹೊಗೆದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳಲ್ಲಿ 5 ಜನರು ತಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಸಮ್ಮತಿಸಿದ್ದಾರೆ.

Advertisement

ಆರೋಪಿಗಳು ತಮ್ಮ ಪರೀಕ್ಷೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ 5 ಆರೋಪಿಗಳಿಗೆ ಮಂಪರು ಪರೀಕ್ಷೆ ನಡೆಸಲು ದೆಹಲಿ ನ್ಯಾಯಾಲಯವು ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ.

ಸಂಸತ್ತಿನಲ್ಲಿನ ಹೊಗೆದಾಳಿ ಪ್ರಕರಣದ ಏಕೈಕ ಮಹಿಳಾ ಆರೋಪಿ ನೀಲಂ ಆಜಾದ್‌ ಮಾತ್ರ ತನ್ನ ಮಂಪರು ಪರೀಕ್ಷೆಗೆ ಸಮ್ಮತಿ ನೀಡಿಲ್ಲ. ಇದೇ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ 8 ದಿನಗಳ ಕಾಲ ವಿಸ್ತರಣೆ ಮಾಡಿದೆ.

ವಿಚಾರಣೆಯ ಬಳಿಕ ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 8 ದಿನಗಳವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

Advertisement
Next Article