ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ'- ಸಿಎಂ ಸ್ಪಷ್ಟನೆ

03:16 PM Jun 03, 2024 IST | Bcsuddi
Advertisement

ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.

ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.

Advertisement
Next Article